Breaking News

ಜನತಾ ದರ್ಶನದಲ್ಲಿ ಸ್ವೀಕೃತವಾದ ಅರ್ಜಿಗಳು, ಮನವಿಗಳನ್ನು ಆದ್ಯತೆ ಮೇರೆಗೆ ತ್ವರಿತವಾಗಿ ವಿಲೇವಾರಿ: ಪಿ.ಎನ್.ರವೀಂದ್ರ

ಚಿಕ್ಕಬಳ್ಳಾಪುರ: ಜನತಾ ದರ್ಶನದಲ್ಲಿ ಸ್ವೀಕೃತವಾದ ಅರ್ಜಿಗಳು, ಮನವಿಗಳನ್ನು ಆದ್ಯತೆ ಮೇರೆಗೆ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಸ್ವೀಕೃತವಾದ ಮನವಿಗಳು, ಅರ್ಜಿಗಳ ವಿಲೇವಾರಿ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಅಧಿಕಾರಿಗಳಿಗೆ ಮನವಿಗಳ ವಿಲೇವಾರಿಗೆ ಸೂಕ್ತ ಕ್ರಮವಹಿಸುವಂತೆ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಳೆದ ಸೆಪ್ಟೆಂಬರ್ ಮಾಹೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆದಿತ್ತು. ಅಂದು 237 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವಿಕರಿಸುವ ಜೊತೆಗೆ ಐಪಿಜಿಆರ್‌ಎಸ್‌ ಪೊರ್ಟಲ್ ತಂತ್ರಾಂಶಕ್ಕೆ ನಮೂದನೆ ಮಾಡಿ ಸಂಬಂಧಪಟ್ಟ ಇಲಾಖೆಗಳಿಗೆ ವಿಲೇವಾರಿ ಕ್ರಮಕ್ಕಾಗಿ ವರ್ಗಾಯಿಸಲಾಗಿತ್ತು. ಅನಂತರವು ಪೊರ್ಟಲ್ ನಲ್ಲಿ ಮತ್ತೆ 8 ಅರ್ಜಿಗಳನ್ನು ಸ್ವಿಕರಿಸಲಾಗಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *