Breaking News

ಸಂಗೀತಾ ಭಟ್ ಸದ್ಯ ಹಿರಿತೆರೆಯಲ್ಲಿ ಬ್ಯುಸಿ….

ಕಸ್ತೂರಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪಂಜರದ ಗಿಳಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಬಣ್ಣದ ಲೋಕದ ನಂಟು ಬೆಳೆಸಿಕೊಂಡಿರುವ ಸಂಗೀತಾ ಭಟ್ ಸದ್ಯ ಹಿರಿತೆರೆಯಲ್ಲಿ ಬ್ಯುಸಿ. ಅದ್ಭುತ ನಟನೆಯ ಮೂಲಕ ಕಿರುತೆರೆಯ ಜೊತೆಗೆ ಹಿರಿತೆರೆಯಲ್ಲಿಯೂ ನಟನಾ ಕಂಪನ್ನು ಪಸರಿಸುತ್ತಿರುವ ಸಂಗೀತಾ ಭಟ್ ಇತ್ತೀಚೆಗಷ್ಟೇ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಯಡಿಯೂರು ಶ್ರೀ ಸಿದ್ಧಲಿಂಗೇಶ್ವರ’ ಧಾರಾವಾಹಿಯಲ್ಲಿ ನಾಗಿಣಿಯಾಗಿ ಕಾಣಿಸಿಕೊಂಡಿದ್ದರು. ಅಂದ ಹಾಗೇ ಸಂಗೀತಾ ಭಟ್ ಅವರಿಗೂ ಸ್ಟಾರ್ ಸುವರ್ಣಗೂ ಇದು ಹೊಸ ಭಾಂದವ್ಯವೇನಲ್ಲ.. ಬದಲಿಗೆ ತುಂಬಾ ಹಳೆಯ ನಂಟು ಇದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಭಾಗ್ಯವಂತರು’ ಧಾರಾವಾಹಿಯಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು ಸಂಗೀತಾ ಭಟ್. ತದ ನಂತರ ಹಿಂತಿರುಗಿ ನೋಡದ ಈಕೆ ಮುಂದೆ ಉದಯ ಟಿವಿಯ ‘ಚಂದ್ರಚಕೋರಿ’, ಸುವರ್ಣ ವಾಹಿನಿಯ ‘ನೀಲಿ’, ಕಸ್ತೂರಿ ವಾಹಿನಿಯ ‘ಚಂದ್ರಮುಖಿ’ ಧಾರಾವಾಹಿಗಳಲ್ಲಿ ಅಭಿ‌ನಯಿಸಿದರು.

Share News

About BigTv News

Check Also

ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್! ರಾಸಲೀಲೆ ಆರೋಪ ಸದ್ದು!

ಯಶು ಬೇಬಿ ಆಡಿಯೋ ಲೀಕ್! ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್.. ಯಶು ಬೇಬಿ ಆಡಿಯೋ ಲೀಕ್! ಖಾಕಿ ಮೇಲೆ ಕಪ್ಪು …

Leave a Reply

Your email address will not be published. Required fields are marked *