ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ಕಚೇರಿಯಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಸಿ.ಎಂ. ಇಬ್ರಾಹಿಂ ಉಚ್ಚಾಟನೆಗೆ ಕೋರ್ ಕಮಿಟಿ ಸದಸ್ಯರಿಂದ ಒತ್ತಾಯ ಹೇರಲಾಗಿತ್ತು. ಸಭೆಯ ಬಳಿಕ ಇಬ್ರಾಹಿಂ ಉದ್ದಾಚಣೆಗೆ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ಕೋರ್ ಕಮಿಟಿ ಸದಸ್ಯರ ಸಭೆ ಕರೆಯಲಾಗಿತ್ತು. ಈ ವೇಳೆ ಈ ತೀರ್ಮಾನ ಕೈಗೊಳ್ಳಲಾಗಿದೆ. ‘ನಮ್ಮದು ಒಂದೇ ಪಕ್ಷ ನಾವು ಬಿಜೆಪಿ ಪರ ನಿಲ್ಲುವುದಿಲ್ಲ’ ಎಂದು ಹೇಳುವ ಮೂಲಕ ಪಕ್ಷದ ವಿರುದ್ಧ ಬಂಡಾಯವೆದ್ದ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಬೇಕು ಎನ್ನುವ ಕೂಗು ಕೇಳಿ ಬಂದಿತ್ತು. ಇದರ ಬೆನ್ನಲ್ಲೆ ಪಕ್ಷ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಜೊತೆಗೆ ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news




