ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ವಿಚಾರಕ್ಕೆ ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, ಹಾಲಿಂದು ಹಾಲಿಗೆ, ನೀರಿಂದು ನೀರಿಗೆ, ಉಪ್ಪು ತಿಂದೋನು ನೀರು ಕುಡಿಲೇಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಇವೆಲ್ಲ ಹಳೇ ಕಾಲದ ಗಾದೆ ಮಾತುಗಳು. ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು. ಪ್ರಾಮಾಣಿಕರಿಗೆ ತೊಂದರೆ ಆಗಬಾರದು. ಯಾರಾದರೂ ಅಕ್ರಮ ಮಾಡಿದರೆ ಅದು ಇಂದಲ್ಲ ನಾಳೆ ಬಯಲಿಗೆ ಬರಬೇಕು. ಸುಮ್ ಸುಮ್ನೆ ಗಾದೆ ಹುಟ್ಟುತ್ತಾ? ತಲ ತಲಾಂತರದ ಸತ್ಯ ಇರುತ್ತದೆ. ಊರಿಗೆ ಬಂದೋಳು ನೀರಿಗೆ ಬರಲ್ವಾ? ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್….ಡ್ಯಾಶ್ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಸತ್ಯವನ್ನು ಮುಚ್ಚಿಹಾಕಲು ಆಗಲ್ಲ, ಕೆಲ ಕಾಲ ಮುಚ್ಚಿಡಬಹುದು ಅಷ್ಟೇ. ಯಾರೇ ತಪ್ಪು ಮಾಡಿದರೂ ಇದ್ರೆ ಶಿಕ್ಷೆ ಆಗಬೇಕು. ಕಾನೂನಿಗಿಂತ ಅತಿರಥರಾದವರು ಯಾರಾದರೂ ಇದ್ದೀವಾ? ನಾನು, ಸಿಎಂ, ಡಿಸಿಎಂ, ಪ್ರಧಾನಿ ಯಾರೂ ಕಾನೂನಿಗೆ ಅತಿರಥರಲ್ಲ. ಯಾರಾದ್ರು ನಾವು above the law ಅಂದುಕೊಂಡಿದ್ದರೆ ಅದಕ್ಕೆ ಸಂವಿಧಾನ ಅವಕಾಶ ನೀಡಿಲ್ಲ. ಅಂಬೇಡ್ಕರ್ ಕಾನೂನಿನ ದೃಷ್ಟಿಯಿಂದ ಎಲ್ಲರೂ ಸಮಾನರು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





