ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಅಕ್ಟೋಬರ್ 22 ರಿಂದ 29ರ ತನಕ ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿಗಳು ನಡೆಯಲಿವೆ. ಅಕ್ಟೋಬರ್ 22 ಮತ್ತು 23 ರಂದು ಅರ್ಹತಾ ಸುತ್ತಿನ ಪಂದ್ಯಗಳಿವೆ.
ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ. ವಿ. ಜಿಲ್ಲಾಡಳಿತ ಮತ್ತು ಜಿಲ್ಲಾ ಟೆನಿಸ್ ಅಸೋಸಿಯೇಷನ್ ಆಶ್ರಯದಲ್ಲಿ ಹೈಸ್ಕೂಲ್ ಮೈದಾನದಲ್ಲಿರುವ ಟೆನಿಸ್ ಕ್ಲಬ್ ಆಶ್ರಯದಲ್ಲಿ ದಾವಣಗೆರೆ ಟೆನಿಸ್ ಕೋರ್ಟ್‌ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿ ಕುರಿತು ಮಾಹಿತಿ ನೀಡಿದರು.
ಡಾ. ವೆಂಕಟೇಶ್ ಎಂ. ವಿ. ಮಾತನಾಡಿ, “ದಾವಣಗೆರೆಯಲ್ಲಿ ಅಕ್ಟೋಬರ್ 22 ರಿಂದ 29ರವರೆಗೆ ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿಗಳು ನಡೆಯಲಿದ್ದು, ವಿವಿಧ ದೇಶದ ಆಟಗಾರರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸುವರು” ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





