ಬೆಂಗಳೂರು: ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದೆ. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.
ಈ ಕುರಿತು ಶುಕ್ರವಾರ ಕುಮಾರಕೃಪ ಅತಿಥಿಗೃಹದ ಬಳಿ ಮಾಧ್ಯಮಗಳ ಪ್ರಶ್ನೆಗಳ ಜೊತೆಗೆ ಮಾತನಾಡಿದ ಅವರು, ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು.
ಸಿಬಿಐ ಅವರು ಶೇ 90 ರಷ್ಟು ತನಿಖೆ ಮುಗಿದಿದೆ ಎಂದು ಹೇಳಿದ್ದಾರೆ. ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ. ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





