ಬೆಂಗಳೂರು: ಕೆ ಆರ್ ಪುರದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟದವರೆಗೆ ಮೆಟ್ರೋ ರೈಲು ವಿಸ್ತ್ರತ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುಯಲ್ ಮೂಲಕ ಶುಕ್ರವಾರ ಉದ್ಘಾಟನೆ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ವರ್ಚುಯಲ್ ಸಭೆ ಮೂಲಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾದರು. ರಾಜ್ಯ ಯೋಜನೆ ಆಯೋಗದ ಉಪಾಧ್ಯಕ್ಷ ಪ್ರೊ ರಾಜೀವ್ ಗೌಡ, ಮಾಜಿ ಸಚಿವ, ಶಾಸಕ ಎಸ್ ಟಿ ಸೋಮಶೇಖರ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.
ಇನ್ನೂ ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ,ಇಂದು ನಿಮ್ಮೆಲ್ಲರೊಂದಿಗಿರುವುದು ಬಹಳ ವಿಶೇಷ ಮತ್ತು ಸ್ಮರಣೀಯ ದಿನ. ಬೆಂಗಳೂರು ನಗರವು ಆಹ್ಲಾದಕರ ಹವಾಮಾನ, ಹಸಿರು ಉದ್ಯಾನವನಗಳು ಮತ್ತು ದೇಶದ ಐಟಿ ರಾಜಧಾನಿ ಎಂದು ಹೆಸರುವಾಸಿಯಾಗಿದೆ. ವಿಶ್ವದರ್ಜೆಯ ಮೆಟ್ರೋ ರೈಲು ವ್ಯವಸ್ಥೆಯನ್ನು ಸೇರಿಸುವುದರೊಂದಿಗೆ, ಕರ್ನಾಟಕದ ಜನತೆಗೆ ಹೆಮ್ಮೆಯ ವಿಷಯವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





