Breaking News

ರೋಹಿತ್ ಶರ್ಮಾ ಅವರು ಪುಣೆ-ಮುಂಬೈ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಕಾರು ಚಾಲನೆ…

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಪುಣೆ-ಮುಂಬೈ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಈಗ ಹಲವು ಊಹಾಪೋಹಗಳಿಗೆ ತೆರೆಬಿದ್ದಿದ್ದು, ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ರೋಹಿತ್ ಶರ್ಮಾ ಮುಂಬೈನಿಂದ ಪುಣೆಗೆ ಬರುವಾಗ ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದು ನಿಜ, ಆದರೆ ಗುರುವಾರ ಅವರು ಗಂಟೆಗೆ 200 ಕಿ.ಮೀ ವೇಗದಲ್ಲಿ ಕಾರು ಚಾಲನೆ ಮಾಡಿದ್ದಾರೆ ಎನ್ನುವುದು ಸುಳ್ಳು ಎಂದು ತಿಳಿದುಬಂದಿದೆ.

ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೂ ಮುನ್ನ ರೋಹಿತ್ ಮುಂಬೈನಿಂದ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂಗೆ ರೋಹಿತ್ ಕಾರು ಚಾಲನೆ ಮಾಡಿಕೊಂಡು ಬಂದಿದ್ದರು. ರೋಹಿತ್ ಹೆದ್ದಾರಿಯಲ್ಲಿ ಗಂಟೆಗೆ 105 ಕಿಮೀ ಮತ್ತು 117 ಕಿಮೀ ವೇಗದಲ್ಲಿ ಚಾಲನೆ ಮಾಡುವಾಗ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಈ ಹೆದ್ದಾರಿಯಲ್ಲಿ ಗಂಟೆಗೆ 100 ಕಿಮೀ ವೇಗದಲ್ಲಿ ಮಾತ್ರ ವಾಹನ ಚಲಾಯಿಸಲು ಅನುಮತಿ ಇದೆ.

Share News

About BigTv News

Check Also

ರಮ್ಯಾ ಹೊಸಯುಗ ಪ್ರಾರಂಭ: ಸ್ಯಾಂಡಲ್ ವುಡ್ಗೆ ಕಾಲಿಡಲು ಮತ್ತೆ ಮನಸು ಮಾಡಿದ ರಮ್ಯಾ.

ಕಿಚ್ಚ ಸುದೀಪ್ ಮತ್ತು ರಮ್ಯಾ ಜೋಡಿ ಸ್ಯಾಂಡಲ್​ವುಡ್​ನ ಸೂಪರ್ ಡೂಪರ್ ಹಿಟ್ ಜೋಡಿಗಳಲ್ಲಿ ಒಂದು. ರಮ್ಯಾಗೆ ಮುಂಗಾರು ಮಳೆ ಡೈರೆಕ್ಟರ್​ …

Leave a Reply

Your email address will not be published. Required fields are marked *