Breaking News

ಇರ್ಫಾನ್ ಪಠಾಣ್ ಕೂಡಾ, ರಶೀದ್ ಖಾನ್ ಜತೆಗೂಡಿ ಕುಣಿದು ಕುಪ್ಪಳಿಸಿದರು….

ಕ್ರಿಕೆಟ್ ಜಗತ್ತಿನ ಹೊಸ ಬದ್ದ ಎದುರಾಳಿಗಳೆಂದು ಬಿಂಬಿತವಾಗಿರುವ ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನ ತಂಡಗಳ ನಡುವಿನ ಕಾದಾಟದಲ್ಲಿ ಕೊನೆಗೂ ಆಫ್ಘಾನಿಸ್ತಾನ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದು ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಆಫ್ಘಾನಿಸ್ತಾನ ದಾಖಲಿಸಿದ ಅತಿದೊಡ್ಡ ಗೆಲುವು ಎನಿಸಿಕೊಂಡಿತು.
ಇಲ್ಲಿನ ಚೆಪಾಕ್‌ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡವು ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 282 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಆಫ್ಘಾನಿಸ್ತಾನ ತಂಡವು ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಯಿತು. ಆಫ್ಘಾನಿಸ್ತಾನ ತಂಡವು ಗೆಲುವು ದಾಖಲಿಸುತ್ತಿದ್ದಂತೆಯೇ ಮೈದಾನದಲ್ಲಿದ್ದ ಆಟಗಾರರು, ಸ್ಟೇಡಿಯಂನಲ್ಲಿದ್ದ ಪ್ರೇಕ್ಷಕರು ಹುಚ್ಚೆದ್ದು ಕುಣಿದು ಸಂಭ್ರಮಿಸಿದರು. ಇನ್ನು ಪಾಕಿಸ್ತಾನ ಎದುರು ಆಫ್ಘಾನ್ ಗೆಲುವಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ವೀಕ್ಷಕ ವಿವರಣೆಗಾರ ಇರ್ಫಾನ್ ಪಠಾಣ್ ಕೂಡಾ, ರಶೀದ್ ಖಾನ್ ಜತೆಗೂಡಿ ಕುಣಿದು ಕುಪ್ಪಳಿಸಿದರು.

Share News

About BigTv News

Check Also

ಆಧ್ಯಾತ್ಮಿಕ ಹಿನ್ನೆಲೆಯುಳ್ಳ ಬೆಟ್ಟಕ್ಕೆ ಕರೆದೊಯ್ದು ಮಹಿಳೆಮೇಲೆ ಲೈಂಗಿಕ ದೌರ್ಜನ್ಯ.!

ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಪವಿತ್ರ ಬೆಟ್ಟದಲ್ಲಿ ವ್ಯಕ್ತಿಯೊಬ್ಬ ಫ್ರೆಂಚ್ ಮಹಿಳೆಗೆ ಮೋಕ್ಷ ಕೊಡಿಸುತ್ತೇನೆಂದು ನಂಬಿಸಿ ಆಧ್ಯಾತ್ಮಿಕ ಹಿನ್ನೆಲೆಯುಳ್ಳ ಬೆಟ್ಟಕ್ಕೆ ಕರೆದೊಯ್ದು …

Leave a Reply

Your email address will not be published. Required fields are marked *