ಕರ್ನಾಟಕದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ವಿವಿಧ ಗಣ್ಯರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಅವರ ಮೇಲೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಅರಣ್ಯ ಸಚಿವರನ್ನು ಪ್ರಶ್ನೆ ಮಾಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪುತ್ರ, ನಟ, ಜೆಡಿಎಸ್ ಪಕ್ಷದ ನಾಯಕ ನಿಖಿಲ್ ಕುಮಾರಸ್ವಾಮಿ ವಿವಾಹದ ಸಂದರ್ಭದಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ಸರ ಧರಿಸಿದ್ದರು ಎಂಬ ಸುದ್ದಿ ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.
ಬುಧವಾರ ಈ ಕುರಿತು ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿ ಸ್ಪಷ್ಟನೆಯನ್ನು ನೀಡಿದ್ದಾರೆ. ‘ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ’ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





