ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾದ ಬಳಿಕ ಅರಣ್ಯಾಧಿಕಾರಿಗಳು ಅಲರ್ಟ್ ಆಗಿದ್ದು, ಯಾರೆಲ್ಲಾ ಆ ರೀತಿಯ ಲಾಕೆಟ್ ಧರಿಸಿದ್ದಾರೋ ಅವರಿಗೆಲ್ಲ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ರಾಜ್ಯಸಭೆ ಸದಸ್ಯ, ನಟ ಜಗ್ಗೇಶ್ ಅವರಿಗೆ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ.
ವರ್ತೂರ್ ಸಂತೋಷ್ ಬಂಧನವಾದ ಬಳಿಕ ಹುಲಿ ಉಗುರಿನ ಲಾಕೆಟ್ ಧರಿಸಿರುವ ಎಲ್ಲರ ಮೇಲೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಲ್ಲಿ ಆಗ್ರಹ ಕೇಳಿ ಬಂದಿದೆ. ತಾನು ಧರಿಸಿರುವುದು ಒರಿಜಿನಲ್ ಹುಲಿ ಉಗುರಿನ ಲಾಕೆಟ್ ಎಂದು ಜಗ್ಗೇಶ್ ಹೇಳಿರುವ ವಿಡಿಯೋ ಭಾರೀ ವೈರಲ್ ಆಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





