ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇದು ಒಕ್ಕಲಿಗ ಪ್ರಾಬಲ್ಯದ ಪ್ರದೇಶದಲ್ಲಿ ದೊಡ್ಡ ಮಟ್ಟದ ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ವಿಶೇಷವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಭಾರೀ ಆಘಾತವನ್ನು ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ರಾಮನಗರ ಜಿಲ್ಲೆ ಮರುನಾಮಕರಣದ ಕುರಿತು ಮಾತನಾಡಿರುವ ಡಿಕೆ ಶಿವಕುಮಾರ್, ‘ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ’ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





