ಬೆಂಗಳೂರು: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಮಗ್ರ ತನಿಖೆಗೆ ಶಿಫಾರಸು ಮಾಡುವಂತೆ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಕೋರಿದೆ. ಈ ಸಂಬಂಧ ಬಿಜೆಪಿ ನಿಯೋಗವು ಗುರುವಾರ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಮತದಾರರ ನಕಲಿ ಗುರುತುಚೀಟಿ ಸಿದ್ಧಪಡಿಸಿ ನೀಡಲಾಗುತ್ತಿತ್ತು. ಇದು ರಾಷ್ಟ್ರೀಯ ಭದ್ರತೆ ಸಂಬಂಧಿಸಿ ಆತಂಕಕಾರಿ ವಿಚಾರ ಎಂದು ಮನವಿ ತಿಳಿಸಿದೆ. ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, ಎನ್‍ಐಎ ಅಥವಾ ಸಿಬಿಐಗೆ ಇದನ್ನು ಒಪ್ಪಿಸಲು ಶಿಫಾರಸು ಮಾಡುವಂತೆ ಮನವಿ ಮಾಡಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





