Breaking News

ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ಪ್ರಹಸನ ತಾರಕಕ್ಕೇ…

ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ನೀಡದೆ ಸತಾಯಿಸುತ್ತಿರುವ ಹಿನ್ನೆಲೆ ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಅಧ್ಯಕ್ಷರ ಕುರ್ಚಿ ಬದಲಾಯಿಸಿ ವಿಭಿನ್ನವಾಗಿ ಆಕ್ರೋಶ ಘಟನೆ ನಡೆಯಿತು.

ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ಪ್ರಹಸನ ತಾರಕಕ್ಕೇರಿದ್ದು, ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಅಧ್ಯಕ್ಷರ ಕುಷನ್ ಚೇರ್ ತೆಗೆದು, ಪ್ಲಾಸ್ಟಿಕ್ ಚೇರ್ ಇಟ್ಟು, ಅಂದು ಅಧ್ಯಕ್ಷರ ಕುರ್ಚಿ ಹೀಗಿತ್ತು. ಸದಸ್ಯರ ವಿಶ್ವಾಸ ಕಳೆದುಕೊಂಡ ಅವರ ಕುರ್ಚಿ ಹೀಗಾಗಿದೆ ಎಂದು ನಗರಸಭೆ ಬಿಜೆಪಿ ಸದಸ್ಯರು ಅಧ್ಯಕ್ಷರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನರಸಭೆಯಲ್ಲಿ ಗದ್ದುಗೆಗಾಗಿ ಗುದ್ದಾಟ ಮುಂದುವರೆದಿದೆ. ಬಿಜೆಪಿ ಪಕ್ಷದ ಆಂತರಿಕ ಒಪ್ಪಂದದಂತೆ ಮೊದಲ ಅವಧಿಗೆ ನಗರಸಭೆ ಅಧ್ಯಕ್ಷರನ್ನಾಗಿ ವರಸಿದ್ಧಿ ವೇಣುಗೋಪಾಲ್ ಅವರನ್ನು ಆಯ್ಕೆ ಮಾಡಲಾಗಿತ್ತು. ಅವರ ಅವಧಿ ಮುಗಿದ ಹಿನ್ನೆಲೆ ಇತ್ತೀಚೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿದರು. ಕೆಲವು ದಿನಗಳ ಬೆಳವಣಿಗೆ ನಂತರ ರಾಜೀನಾಮೆಯನ್ನು ಹಿಂಪಡೆದುಕೊಂಡಿದ್ದರು.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *