ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು( ಅಕ್ಟೋಬರ್ 26) ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಜರುಗಿತು. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನು ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಸಭೆಯಲ್ಲಿ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





