Breaking News

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಸರ್ಕಾರದ ಯೋಜನೆಯನ್ನು ಘೋಷಿಸಿದ್ದಾರೆ…..

ರಾಮನಗರ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಸರ್ಕಾರದ ಯೋಜನೆಯನ್ನು ಘೋಷಿಸಿದ್ದಾರೆ. ಈಗ ಈ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲು ಬ್ರ್ಯಾಂಡ್‌ ಬೆಂಗಳೂರು ಅಡಿಯಲ್ಲಿ ಹಣಕಾಸು ಒದಗಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಪ್ರಸ್ತಾವನೆಯು ಜಿಲ್ಲೆಯನ್ನು ವಿಭಜಿಸಿದ್ದು, ರಾಮನಗರದ ನಿವಾಸಿಗಳು ಈ ಕ್ರಮವನ್ನು ವಿರೋಧಿಸಿದರೆ ಕನಕಪುರದ ನಿವಾಸಿಗಳು ತಮಗಾಗಿ ಪ್ರತ್ಯೇಕ ಜಿಲ್ಲೆಗೆ ಒತ್ತಾಯಿಸಿದ್ದಾರೆ ಎಂದು ಡಿಎಚ್‌ ವರದಿ ಮಾಡಿದೆ.


ರಾಮನಗರ ಜಿಲ್ಲೆ 2007ರಲ್ಲಿ ರೂಪುಗೊಂಡಿತು. ಈಗ ಅದರ ಹೆಸರು ಬದಲಾವಣೆ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಜನರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ. ರಾಮನಗರದಲ್ಲಿ ಮಾತನಾಡಿದ ಬಹುತೇಕ ಎಲ್ಲರೂ ಜಿಲ್ಲೆಗೆ ಮರುನಾಮಕರಣ ಮಾಡುವ ಪ್ರಸ್ತಾಪವನ್ನು ವಿರೋಧಿಸಿದ್ದಾರೆ. ಈ ಪ್ರದೇಶವು ಬೆಂಗಳೂರಿನ ಯಾವುದೇ ಪ್ರಭಾವವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ರಾಮನಗರದ ಹೆಸರನ್ನು ಹಾಗೇ ಇಟ್ಟುಕೊಂಡು ಕೈಗಾರಿಕೆಗಳನ್ನು ಆಕರ್ಷಿಸಲು ಸರ್ಕಾರಕ್ಕೆ ಏನು ಅಡ್ಡಿಯಾಗುತ್ತದೆ ಎಂದು ಕೆಲವರು ಪ್ರಶ್ನಿಸಿದ್ದಾರೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *