ಚಿಕ್ಕಮಗಳೂರು: ಸಂಬಳವಾದ ಮೊದಲ ವಾರವೆಂದು ಮುಂದಿನ ವಾರಂತ್ಯಕ್ಕೆ ಕಾಫಿನಾಡು ಚಿಕ್ಕಮಗಳೂರಿಗೆ ಟ್ರಿಪ್ ಪ್ಲಾನ್ ಮಾಡಿದ್ದೀರಾ..? ಟ್ರಕ್ಕಿಂಗ್, ದೇವಸ್ಥಾನ ಹೀಗೆ ಪ್ರವಾಸಿ ತಾಣಗಳ ಪಟ್ಟಿ ಮಾಡಿಕೊಂಡಿದ್ದೀರಾ..? ಹಾಗಾದರೆ ಇಲ್ಲಿ ಗಮನಿಸಿ. ನಿಮ್ಮ ಪ್ರವಾಸಿ ತಾಣಗಳ ಪಟ್ಟಿಯಿಂದ ಈ ಸ್ಥಳಗಳನ್ನು ಕೈಬಿಟ್ಟು, ಬೇರೆ ಪ್ಲಾನ್ ಮಾಡಿ.
ರಾಜ್ಯದ ಅತ್ಯಂತ ಜನಪ್ರಿಯ ಪ್ರವಾಸಿ ತಾಣ ಮತ್ತು ಚಾರಣ ಸ್ಥಳಗಳಲ್ಲೊಂದೆನಿಸಿಕೊಂಡಿರುವ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ನವೆಂಬರ್ 4 ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ ಹಾಗೂ ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿಯಲ್ಲಿ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ , ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರ ಪ್ರವೇಶ ನಿರ್ಬಂಸಲಾಗಿದೆ. ಅಕ್ಟೋಬರ್ 30 ರಿಂದ ನವೆಂಬರ್ 5ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





