Breaking News

ಅಗ್ನಿ ಸುರಕ್ಷತಾ ನಿಯಮ ಉಲ್ಲಂಘಿಸಿದ 5 ಬಾರ್‌ಗಳಿಗೆ ಬೀಗ….

ಬೆಂಗಳೂರು: ಕೋರಮಂಗಲದಲ್ಲಿ ರೂಫ್‌ಟಾಪ್‌ವೊಂದರಲ್ಲಿ ನಡೆದ ಅಗ್ನಿ ಅವಘಡದಿಂದ ಕಾರ್ಯಾಚರಣೆಗಿಳಿದಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಗ್ನಿ ಸುರಕ್ಷತಾ ನಿಯಮ ಉಲ್ಲಂಘಿಸಿದ 5 ಬಾರ್‌ಗಳಿಗೆ ಬೀಗ ಹಾಕಿಸಿದೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ 167 ವ್ಯಾಪಾರ ಸಂಸ್ಥೆಗಳ ಮೇಲೆ ದಾಳಿ ನಡೆಸಿದರು. ಅಗ್ನಿ ಸುರಕ್ಷತಾ ನಿಯಮ ಉಲ್ಲಂಘನೆ ಮಾಡಿದ 5 ರೂಫ್‌ಟಾಪ್‌ ಬಾರ್‌ಗಳಿಗೆ ಮುಚ್ಚುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಕಳೆದ ವಾರ ಕೋರಮಂಗಲದ ಹುಕ್ಕಾ ಕೆಫೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ನಗರದಾದ್ಯಂತ ವಿವಿಧೆಡೆ ದಾಳಿಗಳನ್ನು ನಡೆಸಲಾಗುತ್ತಿದೆ. ಗುರುವಾರವಷ್ಟೇ ಬಿಬಿಎಂಪಿ ಅಧಿಕಾರಿಗಳು ನಗರದ ಎಲ್ಲಾ ಎಂಟು ವಲಯಗಳಲ್ಲಿ 167 ವ್ಯಾಪಾರ ಸಂಸ್ಥೆಗಳನ್ನು ಪರಿಶೀಲಿಸಿದ್ದಾರೆ. ಅಗ್ನಿ ಸುರಕ್ಷತೆ ಮತ್ತು ಇತರ ಮಾನದಂಡಗಳನ್ನು ಅನುಸರಿಸಲು ಮಾರ್ಪಾಡುಗಳು ಅಥವಾ ಸರಿಪಡಿಸುವ ಕ್ರಮಗಳಿಗಾಗಿ 76 ಮಾಲೀಕರಿಗೆ ನೋಟಿಸ್ ನೀಡಿದ್ದಾರೆ. ಗಂಭೀರ ಉಲ್ಲಂಘನೆಗಾಗಿ ಒಟ್ಟು ಐದು ಮೇಲ್ಛಾವಣಿ ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚಿಸಲಾಗಿದೆ.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *