Breaking News

ಬೆಂಗಳೂರಿನಲ್ಲಿ ಮತ್ತೊಂದು ಅವಘಡ…

ಬೆಂಗಳೂರು ಸೋಮವಾರ ಮತ್ತೊಂದು ಬೃಹತ್ ಬೆಂಕಿ ಅವಘಡಕ್ಕೆ ಸಾಕ್ಷಿಯಾಗಿದೆ. ಪಬ್, ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ ಬೆನ್ನಲ್ಲೆ ಇದೀಗ ಬಸ್‌ಗಳಿಗೆ ಬೆಂಕಿ ಬಿದ್ದಿದೆ. ಒಟ್ಟು ಹತ್ತಕ್ಕೂ ಹೆಚ್ಚು ಬಸ್‌ಗಳು ಬೆಂಕಿಗೆ ಆಹುತಿ ಆಗಿವೆ.

ಬೆಂಗಳೂರಿನ ವೀರಭದ್ರ ನಗರದಲ್ಲಿ ಖಾಸಗಿ ಬಸ್‌ಗಳನ್ನು ನಿಲ್ಲಿಸಲಾಗಿದೆ.

ಈ ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪಕ್ಕದಲ್ಲಿಯೇ ಶೆಡ್ ಗಳಿದ್ದು, ಬೆಂಕಿ ಹೊತ್ತಿಕೊಂಡ ಬಗ್ಗೆ ನಿಖರ ಕಾರಣ ತಿಳಿದು ಬರಬೇಕಿದೆ. ಸ್ಥಳದಲ್ಲಿ ನಿಲ್ಲಿಸಿರುವ ಎರಡು ಬಸ್‌ಗಳಿಗೆ ಮೊದಲು ಬೆಂಕಿ ಹೊತ್ತಿಕೊಂಡು ನಂತರ ಅದು ಹತ್ತಕ್ಕೂ ಹೆಚ್ಚು ಬಸ್‌ಗಳಿಗೆ ಚಾಚಿಕೊಂಡಿತು.

ನೋಡು ನೋಡುತ್ತಿದ್ದಂತೆ ಆಗಸದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಚಾಚಿಕೊಂಡಿತು. ಸ್ಥಳದಲ್ಲೆಲ್ಲ ದಟ್ಟ ಹೊಗೆ ಆವರಿಸಿಕೊಂಡಿದೆ. ಸ್ಥಳೀಯರು ಹತ್ತಿರದ ಪೊಲೀಸ್ ಠಾಣೆ ಮತ್ತು ಬಿಬಿಎಂಪಿಗೆ ಮಾಹಿತಿ ತಿಳಿಸಲಾಗಿದೆ. ಸದ್ಯ ಸ್ಥಳಕ್ಕೆ ಎರಡು ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸುತ್ತಮುತ್ತಲಿನ ಜನರಲ್ಲಿ ಆತಂಕ ಮನೆ ಮಾಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *