ಬೆಳಗಾವಿ: ನಗರದಲ್ಲಿ ನವೆಂಬರ್ 1ರಂದು ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಈ ಬಾರಿಯ ಕನ್ನಡ ಹಬ್ಬದ ಮೆರವಣಿಗೆಯಲ್ಲಿ 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಡೀ ರಾಜ್ಯದಲ್ಲಿ ಬೆಳಗಾವಿಯಲ್ಲೇ ಸಂಭ್ರಮದಿಂದ ರಾಜ್ಯೋತ್ಸವ ಆಚರಿಸಲಾಗುತ್ತದೆ. ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಶುದ್ಧ ಕುಡಿಯುವ ನೀರು, ಮೊಬೈಲ್ ಟಾಯ್ಲೆಟ್ ಮತ್ತಿತರ ಮೂಲಸೌಕರ್ಯ ಒದಗಿಸಲಾಗುವುದು. ರಾಣಿ ಚನ್ನಮ್ಮನ ವೃತ್ತದಲ್ಲಿ ವೀಕ್ಷಕರ ಗ್ಯಾಲರಿ ನಿರ್ಮಿಸಲಾಗಿದೆ’ ಎಂದರು.
ಈ ಸಲದ ರಾಜ್ಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಲು 77 ರೂಪಕಗಳು ನೋಂದಾಯಿಸಿಕೊಂಡಿವೆ. ಗಡಿಯಲ್ಲಿ ನಾಡು, ನುಡಿಯ ಬೆಳವಣಿಗೆಗೆ ಶ್ರಮಿಸಿದ ಕನ್ನಡ ಹೋರಾಟಗಾರರು, ಪತ್ರಕರ್ತರು ಸೇರಿದಂತೆ 25 ಸಾಧಕರನ್ನು ಸತ್ಕರಿಸಲಾಗುವುದು’ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





