ಹುಬ್ಬಳ್ಳಿ: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಕ್ಕೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದರು. ಆಗಿನಿಂದ ಈ ಸಂಬಂಧ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹಾಗೆಯೇ ಹುಬ್ಬಳ್ಳಿಯಲ್ಲಿ ಉದ್ಯಮಿಗಳಿಬ್ಬರು ಹುಲಿ ಉಗುರು ಪೆಂಡೆಂಟ್ ಧರಿಸಿರುರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಂದು ಈ ಇಬ್ಬರು ಉದ್ಯಮಿಗಳ ಮನೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಲಯ ಅರಣ್ಯಧಿಕಾರಿ ಆರ್.ಎಸ್.ಉಪ್ಪಾರ ನೇತೃತ್ವದಲ್ಲಿ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆಗೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎರಡು ಹುಲಿ ಉಗುರಿನ ಪೆಂಡೆಂಟ್ ವಶಕ್ಕೆ ಪಡೆದಿದ್ದಾರೆ. ಇನ್ನು ಉದ್ಯಮಿಗಳು ಇವು ನಕಲಿ ಹುಲಿ ಉಗುರುಗಳು, ಅವುಗಳನ್ನು ಜಾತ್ರೆಯಲ್ಲಿ ಖರೀದಿ ಮಾಡಿದ್ದೇವೆ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





