ದಾವಣಗೆರ : ಮಹಾರಾಷ್ಟ್ರದಲ್ಲಿ ಸರ್ಕಾರ ಪತನವಾದಂತೆ ರಾಜ್ಯದಲ್ಲೂ ಸರ್ಕಾರ ಪತನವಾಗಲಿದೆ ಎಂದು ನಿನ್ನೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು, ಅದಕ್ಕೆ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪ್ರತಿಕ್ರಿಯೆ ನೀಡಿದ್ದು,ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಮೊದಲು ಬಿಜೆಪಿ ಶಾಸಕರ ಬಗ್ಗೆ ಗಮನಹರಿಸಲಿ ಎಂದು ಜಮೀರ್ ಅಹ್ಮದ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ದಾವಣಗೆರೆಯಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಬಳಿ ಬೇಳೆ ಬೇಯಿಸಿಕೊಳ್ಳಲು ಜಾರಕಿಹೊಳಿ ಹೀಗೆ ಮಾಡುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಸಚಿವ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದರು.ಬಿಜೆಪಿಯಲ್ಲಿರುವ ಶಾಸಕರನ್ನು ರಮೇಶ್ ಜಾರಕಿಹೊಳಿ ಮೊದಲು ಉಳಿಸಿಕೊಳ್ಳಲಿ. ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ.ಮೊದಲು ಬಿಜೆಪಿ ಶಾಸಕರ ಬಗ್ಗೆ ಗಮನಹರಿಸಲಿ ಎಂದು ಜಮೀರ್ ಅಹ್ಮದ್ ವ್ಯಂಗ್ಯವಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





