ಬೆಂಗಳೂರು: ಬಿಜೆಪಿಯವರು ಹೇಳಿದ ಕೂಡಲೇ ಸರ್ಕಾರ ಬಿದ್ದುಹೋಗುವುದಿಲ್ಲ. ನಮ್ಮ ಸರ್ಕಾರ ಧೃಢವಾಗಿದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.ಈ ಕುರಿತು ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 39 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂಧಿರಾಗಾಂಧಿ ಅತ್ಯಂತ ಧೈರ್ಯವಂತ ಮಹಿಳೆ.
ದೇಶದ ಬಡವರ ಆರಾಧ್ಯ ದೈವ ಆಗಿದ್ದರು ಎಂದು ಮೆಚ್ಚುಗೆ ಸೂಚಿಸಿದರು. ಇಂದಿರಾಗಾಂಧಿ ಅವರಂಥಾ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.ಬಿಜೆಪಿಯವರಿಗೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಚರಿತ್ರೆ ಇಲ್ಲ. ಕೇವಲ ಖಾಲಿ ದೇಶಭಕ್ತಿ ಬಗ್ಗೆ ಭಾಷಣ ಮಾಡುತ್ತಾರೆ. ಖಾಲಿ ಭಾಷಣಗಳಿಂದ ದೇಶಕ್ಕೆ, ದೇಶದ ಜನರಿಗೆ ಏನೂ ಸಿಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





