ಬೆಂಗಳೂರು: ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿ ಎಸ್.ಮನೋಹರ್ ಅವರು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ.
ಜೊತೆಗೆ ಆಧಾರ ರಹಿತವಾಗಿ ಆರೋಪಗಳನ್ನು ಮಾಡಿದ್ದಾರೆ. ಹೀಗಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. ಡಿ.ಕೆ.ಶಿವಕುಮಾರ್ ಪುಕ್ಕಲ, ಮೋಸಗಾರ, ಸಿ.ಡಿ ಮಾಸ್ಟರ್, ಮಾಜಿ ಮಂತ್ರಿಯಾಗುತ್ತಾರೆ ಎಂದು ರಮೇಶ್ ಜಾರಕಿಹೊಳಿ ನಿನ್ನೆ ಗುಡುಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





