ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.
ಧ್ವಜರೋಹಣದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನವೆಂಬರ್ 1 2023 ರಿಂದ 2024 ನವೆಂಬರ್ 1 ರವರೆಗೆ ಕನ್ನಡ ಸಂಭ್ರಮ ವರ್ಷವನ್ನು ಆಚರಣೆ ಮಾಡುವಂತೆ ಘೋಷಣೆ ಮಾಡಲಾಗಿದ್ದು, ಮುಂದಿನ 1 ವರ್ಷದವರೆಗೆ ಕನ್ನಡ ಸಂಭ್ರಮವನ್ನು ಆಚರಿಸುತ್ತೇವೆ. ಇಡೀ ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದೇವೆ ಎಂದರು.
ನಮ್ಮ ಭಾಷೆ, ನೆಲ, ಜಲ ಸಂಸ್ಕೃತಿ ಬಗ್ಗೆ ಪ್ರತಿಯೊಬ್ಬ ಕನ್ನಡಿಗನೂ ಕೂಡ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡನಾಡು ತಾಯಿನಾಡು, ಕನ್ನಡ ಭಾಷೆ ನನ್ನ ತಾಯಿ ಭಾಷೆ. ಈ ನಾಡಿನ ಋಣ ತೀರಿಸಬೇಕಾದ್ರೆ ಕನ್ನಡ ನೆಲ, ಜಲ ಭಾಷೆ ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





