Breaking News

ತಾಳ-ಮೇಳ ಇಲ್ಲದ ಕಾರಣದಿಂದ ಕಾಂಗ್ರೆಸ್ ಸರ್ಕಾರ ಸ್ವಯಂಕೃತವಾಗಿ ಪತನವಾಗಲಿದೆ…..

ವಿಜಯಪುರ: ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಕಿತ್ತಾಡುತ್ತಿದ್ದರೆ, ಉಪ ಮುಖ್ಯಮಂತ್ರಿ ಸ್ಥಾನಕ್ಕೆ ನಾಲ್ಕೈದು ಜನರ ಮಧ್ಯೆ ಪೈಪೋಟಿ ಇದೆ. ಹೀಗಾಗಿ ಅಧಿಕಾರದ ಸಂಘರ್ಷದಿಂದ ಕಾಂಗ್ರೆಸ್ ಸರ್ಕಾರ ಪತನ ಆಗುವುದು ಖಚಿತ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿಕ್ರಿಯಿಸಿದ್ದಾರೆ.

ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ. ತಾಳ-ಮೇಳ ಇಲ್ಲದ ಕಾರಣದಿಂದ ಕಾಂಗ್ರೆಸ್ ಸರ್ಕಾರ ಸ್ವಯಂಕೃತವಾಗಿ ಪತನವಾಗಲಿದೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಇದೀಗ ಇದೇ ಮಾತನ್ನು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ನಾನು ಈ ಸರ್ಕಾರದ ಸ್ಥಿತಿಗತಿ ಏನಿದೆ ಎಂದು ಹೇಳಿದ್ದೆ ಎಂದರು.

ವಿಜಯಪುರ ಮಹಾನಗರ ಪಾಲಿಕೆ ಅಧಿಕಾರ ಹಿಡಿಯಲು ಅಸಾಧ್ಯವಾದ ಕಾರಣ ನ್ಯಾಯಾಲಯದ ಮೊರೆ ಹೋಗಿ ಮೇಯರ್-ಉಪ ಮೇಯರ್ ಚುನಾವಣೆ ಮುಂದೂಡುವ ಹುನ್ನಾರ ಮಾಡಿರುವುದು ಕಾಂಗ್ರೆಸ್. ನಾನು ಸದಸ್ಯರನ್ನು ಅಪಹರಿಸಿದ್ದೇನೆ ಎನ್ನುವ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಮ್ಮ‌ ಬಳಿಯೇ ಇರುವ ಎಸ್ಪಿ, ಡಿಸಿ ಅವರನ್ನು ಬಳಸಿ ತನಿಖೆ ನಡೆಸಲಿ ಎಂದು ತಿರುಗೇಟು ನೀಡಿದರು.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *