Breaking News

ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಧ್ವಜಾರೋಹಣ……

ಬೆಂಗಳೂರು : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೇಂದ್ರ ಕಛೇರಿ ಆವರಣದ ಮುಂಭಾಗದಲ್ಲಿ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮಾತನಾಡಿ, ನಮ್ಮ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಬೇಕಾದರೆ, ಕನ್ನಡ ಸಾಹಿತ್ಯವನ್ನು ಪ್ರತಿಯೊಬ್ಬ ಕನ್ನಡಿಗನೂ ಓದಬೇಕು, ಕನ್ನಡ ಭಾಷೆಯ ಮೇಲೆ ಅಭಿಮಾನ ಹೊಂದಬೇಕು, ಕನ್ನಡದ ಕಲೆಗಳಿಗೆ ಪ್ರೋತ್ಸಾಹ ನೀಡಬೇಕು. ಈ ಮೂರು ಕೆಲಸಗಳನ್ನು ಮಾಡಿದಾಗ ಮಾತ್ರವೇ ಸಾವಿರಾರು ವರ್ಷದ ಇತಿಹಾಸ ಹೊಂದಿರುವ ಕನ್ನಡ ಭಾಷೆ ಮುಂದುವರೆಯಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಹೆಜ್ಜೆ ಹಾಕೋಣ ಎಂದು ಅವರು ಹೇಳಿದರು.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *