ಹುಬ್ಬಳ್ಳಿ: ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ನಡುವೆ ಹುಬ್ಬಳ್ಳಿ ನಗರದ ಗ್ರಾಮಾಂತರ ಘಟಕ 1ನೇ ಘಟಕದ ಸಿಬ್ಬಂದಿ ಸಾರಿಗೆ ಬಸ್ ಅನ್ನು ವಿಶಿಷ್ಟವಾಗಿ ಅಲಂಕಾರ ಮಾಡಿದ್ದಾರೆ. ಕನ್ನಡಮಯವಾಗಿ ಮಿಂಚುತ್ತಿದ್ದ ಈ ಬಸನ್ನು ನೋಡಲು ಜನರು ನಾ ಮುಂದು ತಾಮುಂದು ಎಂದು ಮುಗಿಬಿದ್ದಾರೆ.
ಸಾರಿಗೆ ಇಲಾಖೆಯ ನಿರ್ವಾಹಕರು ಮತ್ತು ಚಾಲಕರು ಸೇರಿ ಸ್ವಂತ ಖರ್ಚಿನಿಂದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸನ್ನು ‘ಕನ್ನಡಮಯ’ ಮಾಡಿದ್ದು ಇನ್ನೊಂದು ವಿಶೇಷ.ಬಸ್ ಮುಂಭಾಗದಲ್ಲಿ ಭುವನೇಶ್ವರಿಯ ಭಾವಚಿತ್ರ ಅಂಟಿಸಿ ಪೂಜೆ ಮಾಡಲಾಗಿತ್ತು. ಬಣ್ಣಬಣ್ಣದ ಬಲೂನ್‌ಗಳಿಂದ ಬಸ್ ಅಲಂಕರಿಸಲಾಗಿತ್ತು. ಬಸ್ ಒಳಗಡೆ ಎಲ್ಲಿ ನೋಡಿದರೂ ಕನ್ನಡಮಯ. ಕನ್ನಡ ನಾಡು, ನುಡಿ ಮತ್ತು ಭಾಷೆಗಾಗಿ ದುಡಿದ ಕವಿಗಳು, ಕಲಾವಿದರು, ವೀರಯೋಧರು, ಕನ್ನಡದ ಮೇರು ನಟರು, ಸಾಹಿತಿಗಳು ಹೀಗೆ ಪ್ರತಿಯೊಬ್ಬರ ಫೋಟೋವನ್ನು ಹಾಕಲಾಗಿದೆ. ಈ ಮೂಲಕ ಜನರಿಗೆ ಜಾಗೃತಿ ಸಹ ಮೂಡಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





