Breaking News

ಐದು ತಿಂಗಳಿನಲ್ಲಿ ಎಲ್ಲಾ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ….

ಶಿವಮೊಗ್ಗ: ಆ ರಮೇಶ್ ಜಾರಕಿಹೊಳಿ, ಸಿನಿಮಾ ನಟ ಸಿಪಿ ಯೋಗೀಶ್ವರ್ ಅಂಥವರು ಒಂದೆರಡು ಜನ ಸೇರಿಕೊಂಡು ಆಪರೇಷನ್ ಕಮಲ ಅಂತ ಹೊರಟಿದ್ದಾರೆ. ಅಂದು ಯಡಿಯೂರಪ್ಪ ಹಾಗೂ ಅವರ ಮಗ ಬಿ ವೈ ವಿಜಯೇಂದ್ರ ಹಡಬೆ ದುಡ್ಡಿತ್ತು ಆಪರೇಷನ್ ಕಮಲ ಮಾಡಿದರು ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಬುಧವಾರ ಹೊಸನಗರ ತಾಲೂಕು ರಿಪ್ಪನ್ ಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿಯವರಿಗೆ, ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳು ಬಂದಿರುವುದನ್ನ ತಡೆದುಕೊಳ್ಳಲು ಆಗುತ್ತಿಲ್ಲ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕೆಲವರು ಆಪರೇಷನ್ ಕಮಲ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದರು.ರಾಜ್ಯದ ಜನ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ.

ಐದು ವರ್ಷ ನಿರಾತಂಕವಾಗಿ ಸರ್ಕಾರ ಇರುತ್ತದೆ. ಸಿಎಂ ಹಾಗೂ ಡಿಸಿಎಂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಐದು ತಿಂಗಳಿನಲ್ಲಿ ಎಲ್ಲಾ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಕಾಲಾವಕಾಶ ಬೇಕು ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *