Breaking News

ಈಶಾನ್ಯ ರಾಜ್ಯದಲ್ಲಿ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ಹಾಕಬೇಕು….

ಮಿಜ್ರೋಮ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಪೂರ್ಣ ಸಿದ್ಧವಾಗಿವೆ. ಈ ನಡುವೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಿಜೋರಾಂ ಜನತೆಗೆ ಮನವಿ ಮಾಡುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನವೆಂಬರ್ 7 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಆಯ್ಕೆ ಮಾಡುವಂತೆ ಮಿಜೋರಾಂ ಜನತೆಗೆ ಸೋನಿಯಾ ಗಾಂಧಿ ಅವರು ಬುಧವಾರ ಮನವಿ ಮಾಡಿದ್ದಾರೆ. ಯಾವುದೇ ಪ್ರಯೋಗಕ್ಕೆ ಸಮಯವಿಲ್ಲ, ಈಶಾನ್ಯ ರಾಜ್ಯದಲ್ಲಿ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ಹಾಕಬೇಕು ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ವೀಡಿಯೊ ಸಂದೇಶದಲ್ಲಿ ಅವರು ವಿಶೇಷವಾಗಿ ಯುವಕರು ಮತ್ತು ಮಹಿಳೆಯರಿಗೆ ವೈಯಕ್ತಿಕವಾಗಿ ಮನವಿ ಮಾಡಿದರು. ಕಾಂಗ್ರೆಸ್ ಅನುಭವ ಮತ್ತು ಭದ್ರತೆಯ ಕೈಯಾಗಿದೆ. ಮಿಜೋರಾಂನ ಅಭಿವೃದ್ಧಿ, ಅದರ ಜನರ ಸಬಲೀಕರಣ ಮತ್ತು ಸಮಾಜದ ಅತ್ಯಂತ ದುರ್ಬಲರ ರಕ್ಷಣೆಯನ್ನು ಖಾತರಿಪಡಿಸುವ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ ಎಂದು ಅವರು ಹೇಳಿದರು. ಈ ವೇಳೆ ಕರ್ನಾಟಕ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿ ಪಕ್ಷವು ನೀಡಿದ ಭರವಸೆಗಳನ್ನು ಹೇಗೆ ಈಡೇರಿಸಿದೆ ಎಂಬುದನ್ನು ಸೋನಿಯಾ ಗಾಂಧಿ ನೆನಪಿಸಿದರು.

Share News

About BigTv News

Check Also

ಈ ಬಾರಿಯ ಬಜೆಟ್‌ನಲ್ಲಿ ಉದ್ಯಾನ ನಗರಿ ಬೆಂಗಳೂರು ನಗರಕ್ಕೆ ಬಿಗ್ ಗಿಫ್ಟ್ ನಿರೀಕ್ಷೆ….

ಬೆಂಗಳೂರು: ಲೋಕಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಫೆಬ್ರವರಿ 1ರಂದು 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಲಿದೆ. ಈ …

Leave a Reply

Your email address will not be published. Required fields are marked *