ನವದೆಹಲಿ: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಉದ್ಯಮಿಯಿಂದ ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿಚಾರಣೆ ನಡೆಯಲಿದೆ. ಸಂಸತ್ತಿನ ನೀತಿ ನಿಯಮಗಳ ಸಮಿತಿಯು ಈ ವಿಚಾರಣೆಯನ್ನು ಮಾಡಲಿದೆ. ತೃಣಮೂಲ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಜೆಪಿ ನಡುವಿನ ರಾಜಕೀಯ ಕೆಸರೆರಚಾಟಕ್ಕೆ ಈ ಆರೋಪವು ಕಾರಣವಾಗಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಮಹುವಾ ಮೊಯಿತ್ರಾ ಅವರು ಗುರುವಾರ ಲೋಕಸಭೆಯ ನೀತಿ ನಿಯಮಗಳ ಮುಂದೆ ಹಾಜರಾಗಲಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಎತ್ತುವುದಕ್ಕಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಮೊಯಿತ್ರಾ ಲಂಚ ಮತ್ತು ಹಣಕಾಸಿನ ಅನುಕೂಲಗಳನ್ನು ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಟಿಎಂಸಿ ಸಂಸದೆ ಮೊಯುತ್ರಾ ಆರೋಪಗಳನ್ನು ನಿರಾಕರಿಸಿದ್ದಾರೆ. ಆದರೆ, ತಮ್ಮ ಸಂಸತ್ತಿನ ಲಾಗಿನ್ ಐಡಿಯನ್ನು ಹಿರಾನಂದನಿ ಅವರೊಂದಿಗೆ ಹಂಚಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





