Breaking News

ಎಲೆಕ್ಷನ್ ಟಾರ್ಗೆಟ್ ನೀಡಲು ಅವರಿಬ್ಬರೂ ರಾಜ್ಯಕ್ಕೆ ಬಂದಿದ್ದರು: ಯಡಿಯೂರಪ್ಪ.

ಬೆಂಗಳೂರು: ರಾಜ್ಯ ಸರ್ಕಾರ ಎಟಿಎಂ ಆಗಿರುವುದಕ್ಕೆ ರಾಜ್ಯಕ್ಕೆ ವರಿಷ್ಠರು ಭೇಟಿ ನೀಡಿದ್ದಾರೆ. ಕೆಸಿ ವೇಣುಗೋಪಾಲ್ ಮತ್ತು ಸುರ್ಜೆವಾಲ ರಾಜ್ಯಕ್ಕೆ ಆಗಮಿಸಿದ್ದಾರೆ. ಎಲೆಕ್ಷನ್ ಟಾರ್ಗೆಟ್ ನೀಡಲು ಅವರಿಬ್ಬರೂ ರಾಜ್ಯಕ್ಕೆ ಬಂದಿದ್ದರು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆರೋಪಿಸಿದರು.
ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜನರಿಗೆ ನೀಡಿದ ಆಶ್ವಾಸನೆ ಈಡೇರಿಸಲು ಪರದಾಡುತ್ತಿದೆ.ಸರ್ಕಾರದ ಮೇಲೆ ನಿಯಂತ್ರಣವಿಲ್ಲದೆ ಸಿಎಂ ವಿಚಿತ್ರ ಪರಿಸ್ಥಿತಿಯಲ್ಲಿದ್ದಾರೆ. ರಾಜ್ಯದ ಅಭಿವೃದ್ಧಿ ಕಾರ್ಯ ಸಂಪೂರ್ಣವಾಗಿ ಸ್ಥಗಿತವಾಗಿದೆ ಉಚಿತ ವಿದ್ಯುತ್ ಕೊಡುವುದಾಗಿ ಹೇಳಿ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ ಎಂದರು.

ಬರಪೀಡಿತ ಪ್ರದೇಶಕ್ಕೆ ಸಿಎಂ ಸೇರಿ ಒಬ್ಬ ಸಚಿವರು ಕೂಡ ಭೇಟಿ ನೀಡಿಲ್ಲ ಬಹುತೇಕ ಮನೆಯ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆ ಹಣ ತಲುಪಿಲ್ಲ. ಹೀಗಾಗಿ ಕಾಂಗ್ರೆಸ್ ಸರ್ಕಾರದ ಎಲ್ಲಾ ಗ್ಯಾರಂಟಿಗಳು ವಿಫಲವಾಗಿವೆ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಐಟಿ ದಾಳಿಯಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಬಯಲಾಗಿದೆ. ಇದು ಲೂಟಿ ಸರ್ಕಾರ ಎಂಬುದು ಸಾಬೀತಾಗಿದೆ. ಡಿಸಿಎಂ ಡಿಕೆ ಉಪಟಳಕ್ಕೆ ಕಡಿವಾಣ ಹಾಕಲು ಡಿನ್ನರ್ ಆರೇಂಜ್ ಮಾಡಲಾಗಿದೆ.ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಆರೋಪಿಸುತ್ತಿದ್ದಾರೆ ಸಿದ್ದರಾಮಯ್ಯ ಎಲ್ಲದಕ್ಕೂ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

Share News

About BigTv News

Check Also

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್, ಫೋಟೋಶೂಟ್ ಪೋಸ್ಟ್‌ಗೆ ಬ್ರೇಕ್..? ಡಿಜಿಪಿಗೆ ಶಿಫಾರಸು ಪತ್ರ..

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್ ಬೇಡ..! ಖಾಕಿಯ ಘನತೆ ಉಳಿಸಲು ಕಠಿಣ ನಿಯಮಕ್ಕೆ ಶಿಫಾರಸು… ಬೆಂಗಳೂರು: ಪೊಲೀಸ್ ಸಮವಸ್ತ್ರ ಧರಿಸಿ ರೀಲ್ಸ್, …

Leave a Reply

Your email address will not be published. Required fields are marked *