Breaking News

ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ….

ಬೆಂಗಳೂರು: ರಾಜ್ಯದಲ್ಲಿ ಪೂರ್ಣಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ರಾಜ್ಯ ಕಾಂಗ್ರೆಸ್‌ ನಲ್ಲಿ ಎರಡೂವರೆ ವರ್ಷಗಳ ನಂತರ ಸಿಎಂ ಬದಲಾಗುತ್ತಾರೆ ಎಂಬ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದಿದ್ದು, ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ಶಾಸಕ ಬಿ ವೈ ವಿಜಯೇಂದ್ರ ಟ್ವೀಟ್‌ ಮಾಡಿದ್ದು, ಸ್ವಾಧೀನ ಕಳೆದು ಕೊಂಡಿರುವ ‘ಕೈ’ ವರಿಷ್ಠರು ಎಷ್ಟೇ ಅದುಮಿಟ್ಟರೂ ‘ಮುಖ್ಯ ಮಂತ್ರಿ’ ಸ್ಥಾನದ ಅಸ್ಥಿರತೆಯ ಸ್ಥಿತಿ ಆಸ್ಫೋಟಗೊಳ್ಳುತ್ತಲೇ ಇದೆ. ಜನತೆ ಸ್ಥಿರ ಸರ್ಕಾರ ದಯಪಾಲಿಸಿದ್ದರೂ ‘ಕಾಂಗ್ರೆಸ್ ಆಂತರಿಕ ಬೇಗುದಿ’ ಕರ್ನಾಟಕವನ್ನು ನಲುಗಿಸುತ್ತಿದೆ, ಜನರನ್ನು ಬಾಧಿಸುತ್ತಿದೆ ಎಂದು ಕಿಡಿಕಾರಿದ್ಧಾರೆ.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *