ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಈ ವರ್ಷ ಕೂಡ ಖುಷಿ ಸಿಕ್ಕಿಲ್ಲ. ಅವರು ಅಭಿನಯಿಸಿದ ಸಾಲು ಸಾಲು ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗುತ್ತಿವೆ. ಅದರ ಜೊತೆಗೆ ಇತ್ತೀಚೆಗೆ ಬಿಡುಗಡೆಯಾದ ‘ತೇಜಸ್’ ಸಿನಿಮಾ ಕೂಡ ಪ್ಲಾಪ್ ಆಗಿದೆ. ಇದೇ ಬೇಸರದಲ್ಲಿದ್ದಾರೆ ನಟಿ ಕಂಗನಾ ರನೌತ್.
ಕಳೆದ ವಾರ ಬಿಡುಗಡೆಯಾದ ತೇಜಸ್ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡಲು ವಿಫಲವಾಗಿದೆ. ಇದೇ ಬೇಸರದಲ್ಲಿ ನಟಿ ಕಂಗನಾ ರನೌತ್ ಅವರು ಗುಜರಾತ್‌ನ ದ್ವಾರಕಾಧೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ತಮ್ಮ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಮಾನಸಿಕ ಮತ್ತು ಭಾವನಾತ್ಮಕ ಸ್ಥಿತಿಯ ಬಗ್ಗೆಯೂ ಬರೆದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





