ಬೆಂಗಳೂರು: ವಿದ್ಯುತ್ ದರ ಹೆಚ್ಚಳವಾಗಿದೆ ಎಂಬ ಯಡಿಯೂರಪ್ಪ ಅವರ ಹೇಳಿಕೆ ಹಿಂದಿನ ಬಿಜೆಪಿ ಸರ್ಕಾರವನ್ನೇ ಕುರಿತು ಟೀಕೆ ಮಾಡಿದಂತಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಮೂಲಕ ಅವರು ಯಡಿಯೂರಪ್ಪ ಅವರ ಆರೋಪಗಳಿಗೆ ಉತ್ತರ ನೀಡಿದ್ದಾರೆ. ಕೆಇಆರ್‌ಸಿ ಮಾರ್ಚ್ ತಿಂಗಳಿನಲ್ಲಿ ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಹಿಂದಿನ ಬಿಜೆಪಿ ಸರ್ಕಾರದ ಮುಂದೆ ಮಂಡಿಸಿತ್ತು, ಈ ಪ್ರಸ್ತಾವನೆಗೆ ಬಿಜೆಪಿ ಸರ್ಕಾರ ಅನುಮತಿ ನೀಡಿದ್ದರಿಂದ ಮೇ. 12 ಅಂದರೆ ಚುನಾವಣೆಯ ಫಲಿತಾಂಶ ಬರುವ ಹಿಂದಿನ ದಿನವೇ ಹೊಸ ದರವು ಏಪ್ರಿಲ್ 1 ರಿಂದ ಪೂರ್ವಾನ್ವಯ ಆಗುವಂತೆ ಕೆಇಆರ್‌ಸಿ ಜಾರಿಗೊಳಿಸಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





