Breaking News

ಐಷಾರಾಮಿ ಟೊಯೊಟಾ ವೆಲ್‌ಫೈರ್ ಕಾರಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್…

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಸಿನಿಮಾದ ಶೂಟಿಂಗ್ ಬಹುತೇಕ ಮುಕ್ತಾಯಗೊಂಡಿದ್ದು, ಕೇವಲ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆ. ಹೊಸ ಸಿನಿಮಾಕ್ಕಾಗಿ ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಿನ್ನೆ ಸದ್ದಿಲ್ಲದೇ ಮಹೂರ್ತ ನೆರವೇರಿಸಲಾಗಿದೆ.

ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಮಿಲನ ಪ್ರಕಾಶ್ ಆಕ್ಷನ್ ಕಟ್ ಹೇಳುತ್ತಿದ್ದು, ಅಜನೀಶ್ ಲೋಕನಾಥ್ ಅವರ ಮ್ಯೂಸಿಕ್ ಇರಲಿದೆಯಂತೆ. ಸದ್ಯ, ಸಿನಿಮಾಕ್ಕೆ ತಾತ್ಕಾಲಿಕವಾಗಿ ‘ಡಿ-57’ ಎಂಬ ಹೆಸರಿಡಲಾಗಿದೆ. ಇದು ಪಕ್ಕಾ ಮಾಸ್ ಎಂಟರ್‌ಟೈನರ್‌ ಆಗಿರಲಿದೆ ಎಂಬ ಮಾತು ಕೇಳಿಬರುತ್ತಿವೆ. ಚಿತ್ರದ ಮಹೂರ್ತಕ್ಕಾಗಿ ನಟ ದರ್ಶನ್, ದುಬಾರಿ ಬೆಲೆಯ ಐಷಾರಾಮಿ ಟೊಯೊಟಾ ವೆಲ್‌ಫೈರ್ ಕಾರಿನಲ್ಲಿ ಬರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿ

ದರ್ಶನ್ ಅವರು, ಈ ಟೊಯೊಟಾ ವೆಲ್‌ಫೈರ್ ಕಾರನ್ನು ಒಂದೆರಡು ವರ್ಷದ ಹಿಂದೆಯೇ ಖರೀದಿಸಿದ್ದಾರೆ. ಪ್ರಸ್ತುತ, ದೇಶೀಯ ಮಾರುಕಟ್ಟೆಯಲ್ಲಿ ಇದೇ ಕಾರು, ರೂ.1.20 ರಿಂದ ರೂ.1.30 ಕೋಟಿ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. 7 ಆಸನ ಆಯ್ಕೆಯನ್ನು ಹೊಂದಿದ್ದು, ಹೆಚ್ಐ ಮತ್ತು ವಿಐಪಿ ಎಕ್ಸಿಕ್ಯುಟಿವ್ ಲೌಂಜ್ ರೂಪಾಂತರದ ಆಯ್ಕೆಯಲ್ಲಿ ದೊರೆಯುತ್ತದೆ. ಜೊತೆಗೆ ಬ್ಲ್ಯಾಕ್, ಪ್ಲಾಟಿನಂ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *