ಪ್ರೇತ ಸಿನಿಮಾ ಮೂಲಕ ಕಲಾಕರ್ ಹರೀಶ್ ರಾಜ್ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವುದು ಗೊತ್ತೇ ಇದೆ. ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಈ ಚಿತ್ರದ ಆಡಿಯೋ ಲಾಂಚ್ ಇತ್ತೀಚೆಗಷ್ಟೆ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಜೆಸಿ ನಗರದಲ್ಲಿ ನಡೆದ ದಸರಾ ಸಂಭ್ರಮದಲ್ಲಿ ಸಚಿವರಾದ ಬೈರತಿ ಸುರೇಶ್ ತಮ್ಮದೇ ಕ್ಷೇತ್ರದ ಕಲಾವಿದರಾದ ಹರೀಶ್ ರಾಜ್ ನಟನೆಯ ಪ್ರೇತ ಸಿನಿಮಾದ ಆಡಿಯೋ ಲಾಂಚ್ ಮಾಡಿ ಶುಭ ಹಾರೈಸಿದ್ದಾರೆ.
ಈ ವೇಳೆ ಕಾಂತಾರದ ಚೆಲುವೆ ಸಪ್ತಮಿ ಗೌಡ ವಿಶೇಷ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮದ ಮೆರಗು ಹೆಚ್ಚಿಸಿದರು. ಪ್ರೇತ ಸಿನಿಮಾದ ದೂರದ ಊರಿಗೆ ಎಂಬ ಹಾಡು HRP ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯ ಬರೆದಿರುವ ಭಾವುಕ ಗೀತೆಗೆ ನವೀನ್ ಸಜ್ಜು ಧ್ವನಿಯಾಗಿದ್ದು, ಪ್ರವೀಣ್ ಶ್ರೀನಿವಾಸ್ ಮೂರ್ತಿ ಟ್ಯೂನ್ ಹಾಕಿದ್ದಾರೆ. ಹರೀಶ್ ರಾಜ್ ಹಾಗೂ ಅಹಿರಾ ಶೆಟ್ಟಿ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಈಗಾಗಲೇ ಈ ಗಾನಬಜಾನ ಕೇಳುಗರ ಗಮನ ಸೆಳೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





