ಇನ್ಸ್ಪೆಕ್ಟರ್ ವಿರುದ್ಧ ಎಫ್ ಐ ಆರ್….
ಹುಬ್ಬಳ್ಳಿ; ವಾಣಿಜ್ಯನಗರಿ ಹುಬ್ಬಳ್ಳಿಯ ಕೊಟ್ಟಿಲಿಂಗೇಶ್ವರ ನಗರದ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಾಧ್ಯಮದ ವರದಿ ಬೆನ್ನಲ್ಲೇ ಕೇಶ್ವಾಪೂರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಯು.ಎಚ್. ಸಾತೇನಹಳ್ಳಿ ಹಾಗೂ ಎಎಸ್ಐ ಜಯಶ್ರೀ ಛಲವಾದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕೋಟಿಲಿಂಗೇಶ್ವರ ನಗರದ ನಿವಾಸಿ ನಿಖಿಲ್ ಕುಂದಗೋಳ(27) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಕೇಶ್ವಾಪುರ ಠಾಣೆಯ ಇನ್’ಸ್ಪೆಕ್ಟರ್, ಎಎಸ್ಐ ಸೇರಿ ಎಂಟು ಮಂದಿ ವಿರುದ್ಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್’ಸ್ಪೆಕ್ಟರ್ ಯು.ಎಚ್. ಸಾತೇನಹಳ್ಳಿ, ಎಎಸ್ಐ ಜಯಶ್ರೀ ಚಲವಾದಿ, ಪ್ರೀತಿ ಪೊಗಳಾಪುರ, ಧನರಾಜ, ಮಂಜುಳಾ, ಆನಂದಪ್ಪ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ನಿಖಿಲ ಅವರ ತಾಯಿ ಗೀತಾ ಕುಂದಗೋಳ ದೂರು ನೀಡಿದ್ದಾರೆ.
ಒಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಲೇ ಇದೆ. ಪೊಲೀಸ ನಡೆ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದ್ದು, ಈ ಬಗ್ಗೆ ಗೃಹ ಸಚಿವರು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸುವ ಕಾರ್ಯವನ್ನು ಮಾಡಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

