Breaking News
Featured Video Play Icon

ಆತ್ಮಹತ್ಯೆ ಕೇಸ್ ನಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕಟ್ಟಿಟ್ಟಬುತ್ತಿ: ಕಮೀಷನರ್ ಭರವಸೆ…!

ಹುಬ್ಬಳ್ಳಿ: ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ನಡೆದ ನಿಖಿಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಶ್ವಾಪೂರದ ಪಿಐ ಹಾಗೂ ಎಎಸ್ಐ ವಿರುದ್ಧ ಕೂಡ ದೂರು ದಾಖಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುತ್ತದೆ ಎಂದು

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು.ತಪ್ಪು ಮಾಡಿದವರಿಗೆ ಶಿಕ್ಷೆ ಖಂಡಿತ ಕೇಶ್ವಾಪೂರ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಎಸಿಪಿಯವರಿಗೆ ಈ ಪ್ರಕರಣ ತನಿಖೆಗೆ ಆದೇಶಿಸಲಾಗಿದೆ. ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಈ ಕೇಸ್ ನಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದರು.ನಿಖಿಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಖಿಲ್ ಪತ್ನಿ ಕುಟುಂಬ ಸೇರಿದಂತೆ ಕೇಶ್ವಾಪೂರ ಠಾಣೆ ಪಿಐ ಹಾಗೂ ಎಎಸ್ಐ ವಿರುದ್ಧ ಪ್ರಕರಣ ದಾಖಲಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಅವರು ಭರವಸೆ ನೀಡಿದರು.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *