ನವದೆಹಲಿ: ಪ್ರಸ್ತುತ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್ (World Cup 2023) ಟೂರ್ನಿಯಿಂದ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದು, ಈ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣಾ ಮಂಡಳಿ ಕೆಎಲ್ ರಾಹುಲ್ ಅವರನ್ನು ಉಪನಾಯಕನನ್ನಾಗಿ (Vice Captain) ನೇಮಿಸಿದೆ.
ಗಾಯದ ಸಮಸ್ಯೆಯಿಂದಾಗಿ ಹಾರ್ದಿಕ್ ಪಾಂಡ್ಯ ವಿಶ್ವಕಪ್‌ನಿಂದ ಹೊರಗುಳಿದಿರುವುದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶನಿವಾರ ಬೆಳಗ್ಗೆ ಖಚಿತಪಡಿಸಿದೆ. ಪಾದದ ಗಾಯದಿಂದಾಗಿ ಪಾಂಡ್ಯ ಇನ್ನು ಮುಂದಿನ ಪಂದ್ಯಗಳಲ್ಲಿ ಭಾಗವಹಿಸುವುದಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಅವರ ಅನುಪಸ್ಥಿತಿಯಲ್ಲಿ, ಕೆಎಲ್ ರಾಹುಲ್ ತಂಡದ ಉಳಿದ ಪಂದ್ಯಗಳಿಗೆ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಐಸಿಸಿ ಹೇಳಿ
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕಾಲು ಉಳುಕಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ, ನೆದರ್ಲೆಂಡ್ಸ್ ಅಥವಾ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾಕ್ಕೆ ಮರಳುತ್ತಾರೆ ಎಂದು ರೋಹಿತ್ ಶರ್ಮಾ ಹೇಳಿದ್ದರು. ಆದರೀಗ ಪಾಂಡ್ಯ ವಿಶ್ವಕಪ್‌ನಿಂದಲೇ ಹೊರಗುಳಿದಿರುವುದು ಬೇಸರದ ಸಂಗತಿ
ಆರಂಭದಲ್ಲಿ ಕಾಲು ಉಳುಕು ಹೊರತಾಗಿ ಬೇರೇನೂ ಗಂಭೀರ ಸಮಸ್ಯೆ ಇಲ್ಲ ಎನ್ನಲಾಗಿತ್ತು. ಆ ಬಳಿಕ ಪಾದದ ಅಸ್ಥಿರಜ್ಜು ಸಮಸ್ಯೆ ಎದುರಾದ ಕಾರಣ ಗಾಯವು ಗಂಭೀರ ತಿರುವು ಪಡೆಯಿತು. ಇದು ಗ್ರೇಡ್-1 ಗಾಯವಾಗಿರುವುದರಿಂದ, ಚೇತರಿಕೆಗೆ 10-15 ದಿನಗಳ ಸಮಯ ಬೇಕಾಗುತ್ತದೆ. ಹೀಗಾಗಿ ಅವರಿಗೆ ಸಂಪೂರ್ಣ ವಿಶ್ರಾಂತಿ ನೀಡಲಾಗುತ್ತಿದೆ ಎಂದು ಬಿಸಿಸಿಐ ಹಾಗೂ ಐಸಿಸಿ ಮೂಲಗಳು ತಿಳಿಸಿವೆ
bigtvnews | Hubli Dharwad News | Kannada News | Karnataka News Hubli News | News In Hubli | Local news





