Breaking News

ಸಹೋದರನ ಗೋಳಾಟ! ನನ್ನ ಸಹೋದರಿಯನ್ನು ಕೆಲಸದ ವಿಚಾರಕ್ಕೆ ಕೊಲೆ ಮಾಡಲಾಗಿದೆ:

ಬೆಂಗಳೂರು: ನನ್ನ ಸಹೋದರಿಯನ್ನು ಕೆಲಸದ ವಿಚಾರಕ್ಕೆ ಕೊಲೆ ಮಾಡಲಾಗಿದೆ. ಸರ್ಕಾರದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ? ಎಂದು ಹತ್ಯೆಯಾದ ಉಪ ನಿರ್ದೇಶಕಿ ಪ್ರತಿಮಾ ಅವರ ಸಹೋದರ ಗೋಳಾಡಿದ್ದಾರೆ.

ಗಣಿ ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ ತೀರ್ಥಹಳ್ಳಿ ಮೂಲದವರಾಗಿದ್ದು, ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಕ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ರಾತ್ರಿ ಅವರನ್ನು ತಮ್ಮ ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಕಳೆದ 8 ವರ್ಷಗಳಿಂದ ಅದೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪೂರ್ಣಿಮಾ ಕಳೆದ ರಾತ್ರಿ ಮನೆತಲ್ಲಿ ಒಬ್ಬರೇ ಇದ್ದರು. ರಾತ್ರಿ 8 ಗಂಟೆ ವೇಳೆಗೆ ಅವರನ್ನು ಡ್ರೈವರ್ ಕಚೇರಿಯಿಂದ ಮನೆಗೆ ಬಿಟ್ಟು ಬಂದಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ಪ್ರತಿಮಾ ಸಹೋದರ ಕರೆ ಮಾಡಿದರೂ ಅದನ್ನು ಸ್ವೀಕರಿಸಿರಲಿಲ್ಲ. ಬಳಿಕ ಫ್ಲ್ಯಾಟ್ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ

Share News

About BigTv News

Check Also

10 ದಿನಗಳಲ್ಲಿ ನ್ಯಾಯ ಸಿಗದಿದ್ದರೆ ಸಲ್ಲೇಖನ ವ್ರತ! ಸರ್ಕಾರಕ್ಕೆ ಗುಣಧರನಂದಿ ಸ್ವಾಮೀಜಿಗಳ ಕೊನೆಯ ಎಚ್ಚರಿಕೆ…

ಜೈನ ನಿಗಮ ಮಂಡಳಿ ಸ್ಥಾಪನೆಗೆ ಆಗ್ರಹ: ಚಿಕ್ಕೋಡಿಯಿಂದ ಸುವರ್ಣಸೌಧದವರೆಗೆ ಪಾದಯಾತ್ರೆ ಘೋಷಣೆ! ಜೈನ ಸಮುದಾಯದ ಬೇಡಿಕೆ ಈಡೇರದಿದ್ದರೆ ಸಲ್ಲೇಖನ ವ್ರತದ …

Leave a Reply

Your email address will not be published. Required fields are marked *