Breaking News

ಕರ್ನಾಟಕ: ಶೀಘ್ರವೇ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ

ರಿಯಾಯಿತಿ ದರದಲ್ಲಿ ಈರುಳ್ಳಿ ಪೂರೈಕೆ ಮಾಡಲು ಹೈದರಾಬಾದ್‌ ಕೃಷಿ ಸಹಕಾರ ಸಂಘ ಮುಂದಾಗಿದೆ. ಈರುಳ್ಳಿ ದರ ಏರಿಕೆಯಿಂದ ಬೇಸತ್ತಿರುವ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಜನರಿಗೆ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕಡಿಮೆ ದರದಲ್ಲಿ ಈರುಳ್ಳಿ ಸಿಗುವ ಸಾಧ್ಯತೆ ಇದೆ.

ಇದೇ ವೇಳೆ, ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿರುವ ಮದರ್‌ ಡೇರಿಯ ಸಫ‌ಲ್‌ ಚಿಲ್ಲರೆ ಮಳಿಗೆಗಳಲ್ಲಿ ಭಾನುವಾರದಿಂದ ಪ್ರತಿ ಕೆಜಿ ಈರುಳ್ಳಿಯನ್ನು ಸಬ್ಸಿಡಿ ದರವಾದ 25 ರೂ.ಗೆ ಮಾರಾಟ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರದ ಪರವಾಗಿ ಭಾರತದ ರಾಷ್ಟ್ರೀಯ ಸಹಕಾರ ಒಕ್ಕೂಟವು ಬೆಲೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟ ಮಾಡುತ್ತಿದೆ. 20 ರಾಜ್ಯಗಳ 54 ನಗರಗಳಲ್ಲಿ ಎನ್‌ಸಿಸಿಎಫ್ 457 ಚಿಲ್ಲರೆ ಮಳಿಗೆಗಳನ್ನು ಹೊಂದಿದೆ

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *