ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯು ದೇಶದಾದ್ಯಂತ ಭಾರೀ ಕುತೂಹಲ ಕೆರಳಿಸಿದೆ. ಆಡಳಿತರೂಢ ಭಾರತ್ ರಾಷ್ಟ್ರ ಸಮಿತಿ ( ಬಿಆರ್‌ಎಸ್ ), ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಆದರೆ, ಚುನಾವಣೆ ಹತ್ತಿರವಾಗುತ್ತಿದಂತೆ ಬಿಜೆಪಿ ಮಂಕಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈಗ ತೆಲಂಗಾಣದಲ್ಲಿ ಬಿಆರ್‌ಎಸ್ ಹಾಗೂ ಕಾಂಗ್ರೆಸ್ ನಡುವೆ ಹಣಾಹಣಿ ಇರುವುದು ಸಮೀಕ್ಷೆಗಳಿಂದ ತಿಳಿದುಬಂದಿದೆ.
119 ಸ್ಥಾನಗಳನ್ನು ಹೊಂದಿರುವ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಮತದಾನ ನಡೆಯಲಿದೆ. 119 ರಲ್ಲಿ 19 ಸ್ಥಾನಗಳನ್ನು ಪರಿಶಿಷ್ಟ ಜಾತಿ ಮತ್ತು 12 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಅಸೆಂಬ್ಲಿ ಅವಧಿಯು ಜನವರಿ 6, 2024 ರಂದು ಮುಕ್ತಾಯಗೊಳ್ಳಲಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





