Breaking News

ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿ ಮಾಡಲು ಬಂದಿದೆ..

ಬೆಂಗಳೂರು: ಕಾಂಗ್ರೆಸ್ ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ದಿವಾಳಿ ಮಾಡಲು ಅಧಿಕಾರಕ್ಕೆ ಬಂದಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸುವ ಜೊತೆ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುತ್ತಿರುವುದು ನಿಜಕ್ಕೂ ಆತಂಕಕಾರಿ ಎಂದು ರಾಜ್ಯ ಬಿಜೆಪಿ ಟ್ವೀಟ್‌ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲಿಂದ ನೇಕಾರರ ಬದುಕಿಗೆ ಮರಣ ಶಾಸನ ಬರೆಯುತ್ತಿದೆ ಎಂಬುದಕ್ಕೆ ತುಮಕೂರು ಜಿಲ್ಲೆಯೊಂದರಲ್ಲೇ 150ಕ್ಕೂ ಹೆಚ್ಚು ನೇಕಾರರ ಕುಟುಂಬಗಳು ಬೀದಿಗೆ ಬಿದ್ದಿರುವುದು ತಾಜಾ ನಿದರ್ಶನ. ಕಾಂಗ್ರೆಸ್ ಸರ್ಕಾರ ತಂದೊಡ್ಡಿರುವ ವಿದ್ಯುತ್‌ ಲೋಡ್‌ಶೆಡ್ಡಿಂಗ್‌ ಕೃಪೆಯಿಂದಾಗಿ ಪಾರಂಪರಿಕ ನೇಕಾರಿಕಾ ಕಲೆಗಾರಿಕೆಗೂ ನಶಿಸುವ ಅಪಾಯ ತಲೆದೋರುತ್ತಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಇಂಧನ ಸಚಿವ ಕೆ ಜೆ ಜಾರ್ಜ್‌ ಮಾತ್ರ ಕರೆಂಟ್‌ ಇಲ್ಲದ ಕತ್ತಲಿನಲ್ಲಿ ಕಾಣೆಯಾಗಿದ್ದಾರೆ.

Share News

About BigTv News

Check Also

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್, ಫೋಟೋಶೂಟ್ ಪೋಸ್ಟ್‌ಗೆ ಬ್ರೇಕ್..? ಡಿಜಿಪಿಗೆ ಶಿಫಾರಸು ಪತ್ರ..

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್ ಬೇಡ..! ಖಾಕಿಯ ಘನತೆ ಉಳಿಸಲು ಕಠಿಣ ನಿಯಮಕ್ಕೆ ಶಿಫಾರಸು… ಬೆಂಗಳೂರು: ಪೊಲೀಸ್ ಸಮವಸ್ತ್ರ ಧರಿಸಿ ರೀಲ್ಸ್, …

Leave a Reply

Your email address will not be published. Required fields are marked *