Breaking News

ಡಿಸಿಎಂ ಡಿ ಕೆ ಶಿವಕುಮಾರ್‌ ಖುದ್ದು ಸತೀಶ್‌ ಜಾರಕಿಹೊಳಿ ಭೇಟಿ ಮಾಡಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ….

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ಅಸಮಾಧಾನಿತರ ಮುನಿಸು ಹೆಚ್ಚಾಗಿದ್ದು, ಸಚಿವ ಸತೀಶ್‌ ಜಾರಕಿಹೊಳಿ ಪಕ್ಷದ ಹಿರಿಯ ನಾಯಕರ ಮೇಲೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದ್ದು, ಈ ಅಸಮಾಧಾನವನ್ನ ಶಮನಗೊಳಿಸಲು ಡಿಸಿಎಂ ಡಿ ಕೆ ಶಿವಕುಮಾರ್‌ ಖುದ್ದು ಸತೀಶ್‌ ಜಾರಕಿಹೊಳಿ ಭೇಟಿ ಮಾಡಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ.

ರಾಜ್ಯದಲ್ಲಿ ಸರ್ಕಾರ ರಚನೆಯಾಗಿ ಇನ್ನೂ ಆರು ತಿಂಗಳು ಪೂರೈಸಿಲ್ಲ. ಈ ಮಧ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸತೀಶ್‌ ಜಾರಕಿಹೊಳಿ ನಡುವೆ ಮುನಿಸು ಏರ್ಪಟ್ಟಿದೆ. ಅಲ್ಲದೇ ಈ ಹಿಂದೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಬೆಳಗಾವಿ ಗೆ ಭೇಟಿ ನೀಡಿದ್ರು, ಆದರೆ, ಈ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸತೀಶ್‌ ಜಾರಕಿಹೊಳಿ ಜೊತೆ ಡಿ ಕೆ ಶಿವಕುಮಾರ್‌ ಮಾತುಕತೆ ನಡೆಸಿರಲಿಲ್ಲ.

ಇನ್ನೂ ಕೆಲ ಕಾರಣಾಂತರಗಳಿಂದ ಮುನಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ಡಿ ಕೆ ಶಿವಕುಮಾರ್‌ ಖುದ್ದಾಗಿ ಭೇಟಿ ಮಾಡಿ ಗೌಪ್ಯ ಮಾತುಕತೆ ನಡೆಸಿದ್ದಾರೆ. ಬೆಳಗಾವಿ ವಿಚಾರದಲ್ಲಿ ಸತೀಶ್‌ ಜಾರಕಿಹೊಳಿ ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಗೂ ಸಹ ಸಚಿವ ಸತೀಶ್‌ ಜಾರಕಿಹೊಳಿ ಗೈರಾಗುವ ಮೂಲಕ ಅಂತರವನ್ನ ಕಾಯ್ದೆಕೊಂಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *