Breaking News

ಕೆಲಸ ಮಾಡದೆ ಕೇಂದ್ರ ಸರ್ಕಾರದ ಬಗ್ಗೆ ಬೆರಳು ತೋರಿಸಿದ್ರು…

ಚಿತ್ರದುರ್ಗ, ನವೆಂಬರ್‌ 07: ಕೆಲಸ ಮಾಡದೇ ಕೇಂದ್ರ ಸರ್ಕಾರದ ಕಡೆ ಬೆರಳು ಮಾಡುವ ಕಾಂಗ್ರೆಸ್ ಸರ್ಕಾರದ ಕೆಲಸ ಬೇಜವಾಬ್ದಾರಿತನದ ಪರಮಾವಧಿ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಚಿತ್ರದುರ್ಗ ಜಿಲ್ಲೆಗೆ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರ ನೇತೃತ್ವದ ಬರ ಅಧ್ಯಯನ ತಂಡ ಆಗಮಿಸಿದ್ದು, ಜಿಲ್ಲೆಯ ಕೊಳಾಳ್ ಗ್ರಾಮದಿಂದ ಬರ ಅಧ್ಯಯನ ಪ್ರಾರಂಭಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದಿಂದ ಬರ ಪರಿಹಾರಕ್ಕೆ ಪರಿಹಾರ ನೀಡಲಿ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯೆಗೆ ಉತ್ತರಿಸಿದ ಅವರು ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಜನಪರ ಕಾಳಜಿ ಇದೆ. ಕೇಂದ್ರ ತಂಡ ಬಂದು ಈಗಾಗಲೇ ಬರ ಬಗ್ಗೆ ಅಧ್ಯಯನ ನಡೆಸಿ, ಕೇಂದ್ರ ಸರ್ಕಾರಕ್ಕೆ ವರದಿ ನೀಡಿದೆ ಎಂದರು.

ರಾಜ್ಯದಲ್ಲಿ ಜನ ಆರಿಸಿರುವುದು ಕಾಂಗ್ರೆಸ್‌ ಸರ್ಕಾರವನ್ನು, ಈ ಸರ್ಕಾರ ತಾನೇನು ಮಾಡುತ್ತಿದೆ ಎನ್ನುವುದನ್ನು ಹೇಳಲಿ. ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರ ಅಂತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

Share News

About BigTv News

Check Also

ಧಾರವಾಡನಲ್ಲಿ ಪ್ರತಿಭಟನೆಯ ಬೆನ್ನಲ್ಲೇ 24 ಸಾವಿರ ಹುದ್ದೆಗಳಿಗೆ ಮಂಜೂರಾತಿ…

ಬೆಂಗಳೂರು : ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ Dharwadನಲ್ಲಿ ಯುವಕರ ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ರಾಜ್ಯ …

Leave a Reply

Your email address will not be published. Required fields are marked *