Breaking News

ಕ್ರಿಕೆಟ್ ಬೆಟ್ಟಿಂಗ್ 11 ಜನ ಬುಕ್ಕಿಗಳ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಎಷ್ಟೇ ಲಗಾಮು ಹಾಕಿದ್ರು ನಿಲ್ಲದ ಕ್ರಿಕೆಟ್ ಬೆಟ್ಟಿಂಗ್.ಧಾರವಾಡ ನಗರದ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಪಂದ್ಯದ ವೇಳೆಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ, ಒಟ್ಟು 07 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿದ್ದು 11 ಜನ ಆರೋಪಿಗಳನ್ನು ಬಂಧಿಸಿ, 08 ಮೊಬೈಲ್ ಸೇರಿದಂತೆ ಒಟ್ಟು 76,420/- ರೂ ನಗದು ವಶಪಡಿಸಿಕೊಳ್ಳಲಾಗಿದೆ.

ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿ ನಗರದ ಬಂಡೆಮ್ಮ ದೇವಸ್ಥಾನ ಹತ್ತಿರ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರ ಮೇಲೆ ಸಿಸಿಬಿ ತಂಡ ದಾಳಿ ನಡೆಸಿ 01 ಪ್ರಕರಣ ದಾಖಲಿಸಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ 36,120/- ರೂ ನಗದು, 13 ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಉದಯ ಹಾಸ್ಟೆಲ್ ಹತ್ತಿರ ಕ್ರಿಕೆಟ್ ಬೆಟ್ಟಿಂಗ್‌ ನಲ್ಲಿ ತೊಡಗಿದ್ದವರ ಮೇಲೆ ಧಾರವಾಡ ಉಪನಗರ ಠಾಣೆಯ ಪೊಲೀಸರು ದಾಳಿ ನಡೆಸಿ 01 ಪ್ರಕರಣ ದಾಖಲಿಸಿದ್ದು ಓರ್ವ ಆರೋಪಿಯನ್ನು ಬಂಧಿಸಿ 14.500/- ರೂ ನಗದು, 01 ಮೊಬೈಲ್, ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಭೂಸಪ್ಪ ಚೌಕ ಹತ್ತಿರ ಹಾಗೂ ಕೆಂಪಗೇರಿ ಹತ್ತಿರ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರ ಮೇಲೆ ಧಾರವಾಡ ಶಹರ ಠಾಣೆಯ ಪೊಲೀಸರು ದಾಳಿ ನಡೆಸಿ 02 ಪ್ರಕರಣಗಳನ್ನು ದಾಖಲಿಸಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ 13,500/- ರೂ ನಗದು, 02 ಮೊಬೈಲ್, ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನೃಪತುಂಗ ಬೆಟ್ಟದ ಹತ್ತಿರ ಕ್ರಿಕೆಟ್ ಬೆಟ್ಟಿಂಗ್‌ ನಲ್ಲಿ ತೊಡಗಿದ್ದವರ ಮೇಲೆ ಆಶೋಕ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ 3600/- ರೂ ನಗದು, 02 ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗೋಕುಲ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯ ಡೆನಿಸಸ್ ಹೊಟೇಲ್ ಹತ್ತಿರ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರ ಮೇಲೆ ಗೋಕುಲ ರೋಡ್ ಠಾಣೆಯ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದು ಓರ್ವ ಆರೋಪಿಯನ್ನು ಬಂಧಿಸಿ 3200/- ರೂ ನಗದು ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿತ್ನಾಳ ರಸ್ತೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರ ಮೇಲೆ ಬೆಂಡಿಗೇರಿ ಠಾಣೆಯ ಪೊಲೀಸರು ದಾಳಿ ನಡೆಸಿ 01 ಪ್ರಕರಣ ದಾಖಲಿಸಿದ್ದು ಮೂರು ಜನ ಆರೋಪಿಗಳನ್ನು ಬಂಧಿಸಿ 5500/- ಈಶಪಡಿಸಿಕೊಳ್ಳಲಾಗಿದೆ. ನಗದು ಹಾಗೂ ಇನ್ನಿತರ ವಸ್ತುಗಳನ್ನು

ಕ್ರಿಕೆಟ್ ಬುಕ್ಕಿಗಳನ್ನು ಮಟ್ಟ ಹಾಕುವಲ್ಲಿ ವಿಶೇಷ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಸಿಬ್ಬಂದಿಗಳನ್ನು ಮಾನ್ಯ ಪೊಲೀಸ್‌ ಆಯುಕ್ತರು ಶ್ಲಾಘಿಸಿರುತ್ತಾರೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *