ಬಾಹುಬಲಿ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಡಿಸೆಂಬರ್ 22ಕ್ಕೆ ಸಿನಿಮಾ ದೊಡ್ಡಮಟ್ಟದಲ್ಲಿ ತೆರೆಗಪ್ಪಳಿಸಲಿದೆ. ಪ್ರಭಾಸ್ ಕೆಲ ದಿನಗಳಿಂದ ವಿದೇಶದಲ್ಲಿ ಬೀಡು ಬಿಟ್ಟಿದ್ದರು. ಮೊಣಕಾಲು ಶಸ್ತ್ರ ಚಿಕಿತ್ಸೆಗಾಗಿ ಇಟಲಿಗೆ ಹೋಗಿದ್ದರು ಎನ್ನಲಾಗ್ತಿದೆ. ಇದೀಗ ಪ್ರಭಾಸ್ ಹೈದರಾಬಾದ್‌ಗೆ ವಾಪಸ್ ಬಂದಿದ್ದಾರೆ.
ಪ್ರಭಾಸ್ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿರುವ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ. ಇದನ್ನು ನೋಡಿ ಅಭಿಮಾನಿಗಳು ಖುಷಿಯಾಗುತ್ತಿದ್ದಾರೆ. ಶೀಘ್ರದಲ್ಲೇ ‘ಸಲಾರ್’ ಪ್ರಮೋಷನ್ ಶುರುವಾಗಲಿದೆ. ಅಂದಹಾಗೆ ‘ಸಲಾರ್’ ಚಿತ್ರದ ಸ್ಪೆಷಲ್ ಸಾಂಗ್ ಶೂಟಿಂಗ್ ಬಾಕಿಯಿದೆ. ಅದನ್ನು ಶೀಘ್ರದಲ್ಲೇ ಆರಂಭಿಸುತ್ತಾರೆ ಎನ್ನುವ ಮಾತುಗಳು ಕೇಳಿಬರ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





