Breaking News

ಕಾಲುನೋವಿನಿಂದ ಬಳಲುತ್ತಿದ್ದ ಎಎಸ್‌ಐ ವಿಷ ಸೇವಿಸಿ ಆತ್ಯಹತ್ಯೆ…

ಕುಂದಗೋಳ: ತಾಲೂಕಿನ ಗುಡಿಗೇರಿಯ ಪೊಲೀಸ್ಠಾಣೆಯ ಎಎಸ್‌ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಅವರು ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ರಾತ್ರಿ ಪಾಳಿ ಕಾರ್ಯನಿರ್ವಹಿಸಿ ಹೋಗಿದ್ದ ಶಾಂತವೀರಪ್ಪ ಅವರು ವಸತಿ ಗೃಹದ ಆವರಣದ ಬಳಿ ದೇಗುಲ ಭಾಗದಲ್ಲಿ ಮಲಗಿದ್ದಾರೆ. ಮಂಗಳವಾರ ಮಧ್ಯಾಹ್ನ ಊಟಕ್ಕೆ ಎಬ್ಬಿಸಲು ಹೋದಾಗ ಅವರು ಎದ್ದಿಲ್ಲ. ಅವರನ್ನು ಲಕ್ಷೇಶ್ವರ ಆಸ್ಪತ್ರೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಎಎಸ್‌ಐ ಬಸವರಾಜ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಅವರು ಕೆಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು ಎಂದು ಅವರ ಜತೆಗಿದ್ದವರು ತಿಳಿಸಿದ್ದಾರೆ. ಈ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ತಿಳಿಸಿದ್ದಾರೆ. ಬಸವರಾಜ ಅವರು ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಶಾಂತಗಿರಿ ಗ್ರಾಮದವರು. ಅವರಿಗೆ ಪತ್ನಿ ಹಾಗೂ ಮೂವರು ಮಕ್ಕಳು ಇದ್ದಾರೆ.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *