ಬೆಂಗಳೂರು: ಹಿಂದೂ ಹೆಣ್ಮಕ್ಕಳ ಸುಮಂಗಲಿತನ ಕಿತ್ತುಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ಕಿಡಿಕಾರಿದರು. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕರ್ನಾಟಕದ ಮಹಿಳೆಯರ ಪರಿಸ್ಥಿತಿ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ತಾನು ಹೋದುದೇ ದಾರಿ ಎಂಬ ಉದ್ಧಟತನದ ಮುಖ್ಯಮಂತ್ರಿ ಮತ್ತು ರಾಜ್ಯ ಸರಕಾರವನ್ನು ನಾವು ಬೇರೆಲ್ಲೂ ಕಾಣಲಿಲ್ಲ. ಇದೊಂದು ರಾಕ್ಷಸ ಸರಕಾರ ಎಂದು ಹೇಳಿದರೂ ತಪ್ಪಾಗಲಾರದು ಎಂದು ಟೀಕಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





